
ಭಾರತೀಯ ಅರ್ಥವ್ಯವಸ್ಥೆಯು ಸತತ ಐದು ಕ್ಯಾಲೆಂಡರ್ ವರ್ಷಗಳಲ್ಲಿ ಶೇ. 7ಕ್ಕಿಂತ ಹೆಚ್ಚಿನ ಜಿಡಿಪಿ ಬೆಳವಣಿಗೆ ದಾಖಲಿಸಿದ್ದು, 20 ವರ್ಷಗಳ ಹಳೆಯ ದಾಖಲೆಯನ್ನು ಮುರಿಯಲು ಸಜ್ಜಾಗಿದೆ.
ಐಎಂಎಫ್, ವಿಶ್ವ ಬ್ಯಾಂಕ್ ಮತ್ತು ಎಡಿಬಿ ಸಂಸ್ಥೆಗಳು ಭಾರತದ ಆರ್ಥಿಕ ಬೆಳವಣಿಗೆಯು ಈ ವರ್ಷ ಮತ್ತು ಮುಂದಿನ ವರ್ಷ ಶೇ. 7 ಅಥವಾ ಅದಕ್ಕಿಂತ ಹೆಚ್ಚಿರಲಿದೆ ಎಂದು ಅಂದಾಜಿಸಿವೆ.
ಕೊರಿಯಾ ಇನ್ಸ್ಟಿಟ್ಯೂಟ್ನ ದಕ್ಷಿಣ ಏಷ್ಯಾ ಮುಖ್ಯಸ್ಥ ಕ್ಯುಂಗ್ಹೂನ್ ಕಿಮ್ ಈ ಮಾಹಿತಿಯನ್ನು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.