Indian Politics
ಬಿಡದಿ ಟೌನ್‌ಶಿಪ್ ವಿವಾದ: ಹೆಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ರೈತರ ಉಪವಾಸ ಸತ್ಯಾಗ್ರಹ ಅಂತ್ಯ

ಬಿಡದಿ ಟೌನ್‌ಶಿಪ್ ವಿವಾದ: ಹೆಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ರೈತರ ಉಪವಾಸ ಸತ್ಯಾಗ್ರಹ ಅಂತ್ಯ

tv9kannada3h
THE BRIEF
1

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಮತ್ತು ಮಹಿಳೆಯರನ್ನು ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದು ಚನ್ನಪಟ್ಟಣದ ಪೊಲೀಸ್ ಭವನದಲ್ಲಿಟ್ಟ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಆಕ್ರೋಶ ವ್ಯಕ್ತಪಡಿಸಿದರು.

2

ಬೈರಮಂಗಲದ ರೈತರು ಕಳೆದ 18 ತಿಂಗಳಿಂದ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದರೂ, ಮಹಿಳೆಯರನ್ನು ರಸ್ತೆಯಲ್ಲಿ ಎಳೆದಾಡಿ ಹಲ್ಲೆ ಮಾಡಲಾಗಿದೆ ಎಂದು ಧರಣಿನಿರತ ಮಹಿಳೆಯರು ಕುಮಾರಸ್ವಾಮಿ ಎದುರು ಕಣ್ಣೀರಿಟ್ಟರು.

3

ಕುಮಾರಸ್ವಾಮಿ ಅವರು ಎಸ್.ಪಿ. ರೋಹನ್ ಜಗದೀಶ್ ಹಾಗೂ ಡಿಐಜಿಪಿ ಗಿರೀಶ್ ಅವರಿಗೆ ದೂರವಾಣಿ ಕರೆ ಮಾಡಿ ಪೊಲೀಸರನ್ನು ಸಸ್ಪೆಂಡ್ ಮಾಡುವಂತೆ ಎಚ್ಚರಿಕೆ ನೀಡಿದ ಬಳಿಕ, ರೈತರಿಗೆ ಬಾಳೆಹಣ್ಣು ತಿನ್ನಿಸಿ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದರು.