
ಭಾರತೀಯ ಹವಾಮಾನ ಇಲಾಖೆಯು ಸೆಪ್ಟೆಂಬರ್ 1ರವರೆಗೆ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್ ಮತ್ತು ಒಡಿಶಾದಲ್ಲಿ ಸಕ್ರಿಯ ಮಾನ್ಸೂನ್ ಪ್ರಭಾವದಿಂದಾಗಿ ವ್ಯಾಪಕ ಮಳೆಯಾಗಲಿದೆ.
ಪಶ್ಚಿಮ ಕರಾವಳಿ, ಹಿಮಾಲಯ ಪ್ರದೇಶ ಮತ್ತು ಈಶಾನ್ಯ ಭಾರತದ ರಾಜ್ಯಗಳಲ್ಲಿ ಮುಂದಿನ 4-5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.