
ಬೆಂಗಳೂರಿನ ಫೈವ್ ಸ್ಟಾರ್ ಮತ್ತು 3 ಸ್ಟಾರ್ ಹೋಟೆಲ್‌ಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಆಗಸ್ಟ್ 8 ರಂದು ದಿಢೀರ್ ದಾಳಿ ನಡೆಸಿದ್ದಾರೆ.
ತಪಾಸಣೆ ವೇಳೆ ಹೋಟೆಲ್‌ಗಳ ಅಡುಗೆಮನೆ, ಆಹಾರ ಸಂಗ್ರಹಣೆ ಮತ್ತು ನೈರ್ಮಲ್ಯದಲ್ಲಿ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆಯಾಗಿರುವುದು ಅಧಿಕಾರಿಗಳಿಗೆ ಕಂಡುಬಂದಿದೆ.
ಈ ಅಧ್ವಾನಗಳ ಬಗ್ಗೆ ಆರೋಗ್ಯ ಸಚಿವ ಯುಟಿ ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದು, ಹೋಟೆಲ್‌ಗಳ ಸ್ಥಿತಿಗತಿಯನ್ನು ಜನರಿಗೆ ತಿಳಿಸಿಕೊಡಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.