ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿ ಸುಮಾ ಸಾಹುಕಾರ್ ಸಲ್ಲಿಸಿದ್ದ ಸುಳ್ಳು ಆದಾಯ ಪ್ರಮಾಣಪತ್ರದ ಅರ್ಜಿಯನ್ನು ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
ತಿಂಗಳಿಗೆ 2.70 ಲಕ್ಷ ರೂ. ಸಂಬಳ ಪಡೆಯುವ ತಂದೆಯ ಮಗಳಾಗಿ, ಕುಟುಂಬದ ವಾರ್ಷಿಕ ಆದಾಯವನ್ನು ಕೇವಲ 40 ಸಾವಿರ ರೂ. ಎಂದು ಸುಳ್ಳು ಮಾಹಿತಿ ನೀಡಿದ್ದನ್ನು ನ್ಯಾಯಪೀಠ ಪ್ರಶ್ನಿಸಿದೆ.
ನ್ಯಾಯಾಲಯದ ತರಾಟೆಯ ನಂತರ ಸುಮಾ ಸಾಹುಕಾರ್ ಅವರು ತಮ್ಮ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.