
ನೇಪಾಳದಲ್ಲಿ ಸಂಭವಿಸಿದ ಭೀಕರ ಜಲಪ್ರಳಯ ಮತ್ತು ಭೂಕುಸಿತದ ಅವಶೇಷಗಳಡಿ ಸಿಲುಕಿದ್ದ 2 ವರ್ಷದ ಮಗುವನ್ನು ರಕ್ಷಣಾ ಪಡೆಗಳು ಸತತ ಕಾರ್ಯಾಚರಣೆ ನಡೆಸಿ ಜೀವಂತವಾಗಿ ರಕ್ಷಿಸಿವೆ.
ಭಾರಿ ಮಳೆಯಿಂದಾಗಿ ಮನೆ ಕುಸಿದು ಮಣ್ಣಿನ ರಾಶಿಯಡಿ ಸಿಲುಕಿದ್ದ ಮಗುವನ್ನು ನೇಪಾಳ ಸೇನೆ, ಸಶಸ್ತ್ರ ಪೊಲೀಸ್ ಪಡೆ ಮತ್ತು ಸ್ಥಳೀಯರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಹೊರತೆಗೆದಿದ್ದಾರೆ.
ಯಾವುದೇ ಗಂಭೀರ ಗಾಯಗಳಿಲ್ಲದೆ ಮಗುವನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಈ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.