
ಮುರಸು ಚಂಡಮಾರುತ ತೀವ್ರಗೊಂಡಿರುವುದು ಹಾಗೂ ರಾಜ್ಯದಲ್ಲಿ ಈಶಾನ್ಯ ಮುಂಗಾರು ತೀವ್ರಗೊಂಡಿರುವುದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.
ನವೆಂಬರ್ 7ರ ವರೆಗೆ ಬೆಂಗಳೂರು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿಯೂ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಿಂಚು - ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.