
ಯುಪಿಐ ವಹಿವಾಟುಗಳ ಮೇಲೆ ಶುಲ್ಕ ವಿಧಿಸಲಾಗುತ್ತದೆ ಎಂಬ ವದಂತಿಗಳಿಗೆ ತೆರೆ ಎಳೆದಿರುವ ಕೇಂದ್ರ ಹಣಕಾಸು ಸಚಿವಾಲಯ, ಪೇಮೆಂಟ್ ಅಂಡ್ ಸೆಟಲ್ಮೆಂಟ್ ಸಿಸ್ಟಮ್ಸ್ ಕಾಯ್ದೆಯ ಸೆಕ್ಷನ್ 10A ಅಡಿಯಲ್ಲಿ ಹೊಸ ಅಧಿಸೂಚನೆ ಹೊರಡಿಸಿದೆ.
ಬೀದಿ ಬದಿ ವ್ಯಾಪಾರಿಗಳು, ಸಣ್ಣ ಅಂಗಡಿಕಾರರು, ಟ್ಯಾಕ್ಸಿ ಚಾಲಕರು ಮತ್ತು ಸಾಮಾನ್ಯ ಗ್ರಾಹಕರಿಗೆ ₹2,000 ವರೆಗಿನ ಯುಪಿಐ ಹಾಗೂ ರೂಪೇ ಡೆಬಿಟ್ ಕಾರ್ಡ್ ವಹಿವಾಟುಗಳು ಸಂಪೂರ್ಣ ಉಚಿತವಾಗಿ ಮುಂದುವರಿಯಲಿವೆ.
ಭವಿಷ್ಯದಲ್ಲಿ ₹2,000 ಕ್ಕಿಂತ ಹೆಚ್ಚಿನ ವಹಿವಾಟಿಗೆ ಎಂಡಿಆರ್ ದರ ಜಾರಿಗೆ ಬಂದರೂ, ದೊಡ್ಡ ವ್ಯಾಪಾರಿಗಳು ಮಾತ್ರ ಅದನ್ನು ಪಾವತಿಸಬೇಕಿರುತ್ತದೆಯೇ ಹೊರತು ಸಾಮಾನ್ಯ ಗ್ರಾಹಕರ ಮೇಲಲ್ಲ.