
ಮುಂಬೈನ ಜುಹು ಪ್ರದೇಶದಲ್ಲಿ ಭಾನುವಾರ ಸಂಜೆ ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದಿದ್ದು, ನಟ ಅಪಾಯದಿಂದ ಪಾರಾಗಿದ್ದಾರೆ.
ಈ ದಾಳಿಯಲ್ಲಿ ಕಾರಿನ ಚಾಲಕ ಫಿರ್ದೋಜ್ ಹಾಗೂ ಉಮೇಶ್ ಚೌಹಾಣ್ ಎಂಬುವವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿದುಬಂದಿದ್ದು, ಸಲ್ಮಾನ್ ಖಾನ್ ಜೊತೆ ಕೆಲಸ ಮಾಡದಂತೆ ಬೆದರಿಕೆ ಹಾಕಲಾಗಿದೆ.