
ನಟ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ ಶಿವರಾಜ್ಕುಮಾರ್, ಯಶ್ ಅವರ ಸಾಧನೆಯನ್ನು ಕಂಡು ಸಂತೋಷ ವ್ಯಕ್ತಪಡಿಸಿದ್ದಾರೆ.
ಯಶ್ ನನ್ನ ಸ್ವಂತ ಸಹೋದರನಿದ್ದಂತೆ ಎಂದು ಬಣ್ಣಿಸಿದ ಶಿವಣ್ಣ, ಅವರು ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆದಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯ ಎಂದರು.
ಗೀತು ಮೋಹನ್ದಾಸ್ ನಿರ್ದೇಶನದ ಈ ಚಿತ್ರದ ಟ್ರೇಲರ್ ಅದ್ಭುತವಾಗಿ ಮೂಡಿಬಂದಿದ್ದು, ತಾನು ಕೂಡ ಸಿನಿಮಾ ನೋಡಲು ಕಾತರನಾಗಿದ್ದೇನೆ ಎಂದು ಶಿವರಾಜ್ಕುಮಾರ್ ತಿಳಿಸಿದ್ದಾರೆ.