
ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ 160 ಮಂದಿ ಮೃತಪಟ್ಟಿದ್ದು, ಸುಮಾರು 750 ಮಂದಿ ನಾಪತ್ತೆಯಾಗಿದ್ದಾರೆ.
ನಾಪತ್ತೆಯಾದವರಲ್ಲಿ ಕನಿಷ್ಠ 133 ಭಾರತೀಯರು ಸೇರಿದ್ದು, ಆಸ್ಟ್ರೇಲಿಯಾ, ಬ್ರಿಟನ್, ಅಮೆರಿಕ ಸೇರಿದಂತೆ ಹಲವು ದೇಶಗಳ ಪ್ರಜೆಗಳೂ ನಾಪತ್ತೆಯಾದವರ ಪಟ್ಟಿಯಲ್ಲಿದ್ದಾರೆ.
ಪ್ರವಾಹದಿಂದ 430 ಮೆಗಾವಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯಕ್ಕೆ ಹಾನಿಯಾಗಿದ್ದು, ಸಂತ್ರಸ್ತ ಭಾರತೀಯರಿಗಾಗಿ +977 9851316807 ಮತ್ತು +977 9709107500 ಸಹಾಯವಾಣಿಗಳನ್ನು ಆರಂಭಿಸಲಾಗಿದೆ.