Education
ನಕಲಿ ಅಂಕಪಟ್ಟಿ ಸಲ್ಲಿಸಿ ಉದ್ಯೋಗ ಪಡೆದ ನಾಲ್ವರಿಗೆ 2 ವರ್ಷ ಜೈಲು ಶಿಕ್ಷೆ

ನಕಲಿ ಅಂಕಪಟ್ಟಿ ಸಲ್ಲಿಸಿ ಉದ್ಯೋಗ ಪಡೆದ ನಾಲ್ವರಿಗೆ 2 ವರ್ಷ ಜೈಲು ಶಿಕ್ಷೆ

tv9kannada2h
THE BRIEF
1

ನಕಲಿ ದ್ವಿತೀಯ ಪಿಯುಸಿ ಅಂಕಪಟ್ಟಿಗಳನ್ನು ಸಲ್ಲಿಸಿ ಗ್ರಾಮ ಆಡಳಿತಾಧಿಕಾರಿ ಹುದ್ದೆ ಪಡೆದಿದ್ದ ನಾಲ್ವರಿಗೆ ಬೆಳಗಾವಿಯ ಎರಡನೇ ಜೆಎಂಎಫ್‌ಸಿ ನ್ಯಾಯಾಲಯವು ತಲಾ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು 19 ಸಾವಿರ ರೂ. ದಂಡ ವಿಧಿಸಿದೆ.

2

2012ರ ಸೆಪ್ಟೆಂಬರ್ 6ರಂದು ನಡೆದ ನೇಮಕಾತಿಯಲ್ಲಿ ರಾಜು ವೆಂಕಟೇಶಪ್ಪ, ಮೋಹನ್‌ಕುಮಾರ್, ಮಂಜುನಾಥ ಬೈಚಪ್ಪ ಮತ್ತು ಬಾಲಕೃಷ್ಣ ವೆಂಕಟಪ್ಪ ಎಂಬುವರು ಬೆಂಗಳೂರಿನ ವ್ಯಕ್ತಿಯೊಬ್ಬರಿಂದ ನಕಲಿ ಅಂಕಪಟ್ಟಿ ಪಡೆದು ವಂಚಿಸಿದ್ದರು.

3

ನೇಮಕಾತಿಯ ನಂತರ ದಾಖಲೆಗಳ ಪರಿಶೀಲನೆ ವೇಳೆ ವಂಚನೆ ಬಯಲಾದ ಹಿನ್ನೆಲೆಯಲ್ಲಿ ಅಂದಿನ ಜಿಲ್ಲಾಧಿಕಾರಿ ಎನ್. ಜಯರಾಮ್ ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.