
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು UGNEET-2026ರ ಮೊದಲ ಸುತ್ತಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ.
ಸೀಟು ಪಡೆದ ಅಭ್ಯರ್ಥಿಗಳು ಸೆಪ್ಟೆಂಬರ್ 2ರೊಳಗೆ ಚಾಯ್ಸ್ ಆಯ್ಕೆ ಮಾಡಿಕೊಳ್ಳಬೇಕು ಮತ್ತು ಸೆಪ್ಟೆಂಬರ್ 3ರೊಳಗೆ ಶುಲ್ಕ ಪಾವತಿಸುವುದು ಕಡ್ಡಾಯವಾಗಿದೆ.
ಚಾಯ್ಸ್-1 ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಸೆಪ್ಟೆಂಬರ್ 4ರೊಳಗೆ ಸಂಬಂಧಪಟ್ಟ ಕಾಲೇಜಿನಲ್ಲಿ ಪ್ರವೇಶ ಪಡೆಯಬೇಕೆಂದು ಪ್ರಾಧಿಕಾರದ ನಿರ್ದೇಶಕ ಹೆಚ್. ಪ್ರಸನ್ನ ಸೂಚಿಸಿದ್ದಾರೆ.