
ವಾರಕ್ಕೆ 5 ದಿನಗಳ ಕೆಲಸದ ಅವಧಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಸೆಪ್ಟೆಂಬರ್ 11 ರಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ.
ಬ್ಯಾಂಕ್ ನೌಕರರು ಖಾಲಿ ಹುದ್ದೆಗಳ ಭರ್ತಿ ಮತ್ತು ಕೆಲಸದ ಒತ್ತಡ ತಗ್ಗಿಸುವಂತೆ ಒತ್ತಾಯಿಸಿದ್ದು, ಬೇಡಿಕೆ ಈಡೇರದಿದ್ದರೆ ಸೆಪ್ಟೆಂಬರ್ 28ರಿಂದ 3 ದಿನಗಳ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮುಷ್ಕರದ ದಿನದಂದು ಚೆಕ್ ಕ್ಲಿಯರೆನ್ಸ್ ಮತ್ತು ನಗದು ವಹಿವಾಟುಗಳಿಗೆ ಅಡಚಣೆಯಾಗಲಿದ್ದು, ಆನ್‌ಲೈನ್ ನೆಟ್‌ಬ್ಯಾಂಕಿಂಗ್ ಮತ್ತು ಯುಪಿಐ ಸೇವೆಗಳು ಮಾತ್ರ ಎಂದಿನಂತೆ ಕಾರ್ಯನಿರ್ವಹಿಸಲಿವೆ.