
ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಮಾಜಿ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಅನಿಲ್ ಮಿಶ್ರಾ ಅವರಿಗೆ ಎಸ್ಐಟಿ ಕ್ಲೀನ್ ಚಿಟ್ ನೀಡಿದೆ.
ಜೂನ್ 13ರಂದು ರಚನೆಯಾದ ಎಸ್ಐಟಿ ತನ್ನ ಅಂತಿಮ ವರದಿಯಲ್ಲಿ ಅವಿನಾಶ್ ಶುಕ್ಲಾ ಸೇರಿದಂತೆ 8 ಜನರನ್ನು ಮಾತ್ರ ಆರೋಪಿಗಳೆಂದು ಹೆಸರಿಸಿದ್ದು, ಇವರನ್ನು ಈಗಾಗಲೇ ಬಂಧಿಸಲಾಗಿದೆ.
ಅವ್ಯವಹಾರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಚಂಪತ್ ರಾಯ್ ಮತ್ತು ಅನಿಲ್ ಮಿಶ್ರಾ ಜೂನ್ 27ರಂದು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು.