
ಮಧ್ಯಪ್ರದೇಶ ಹೈಕೋರ್ಟ್ನಲ್ಲಿ 37 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದ ನ್ಯಾಯಮೂರ್ತಿ ಅವನೀಂದ್ರ ಕುಮಾರ್ ಸಿಂಗ್ ಅವರು ತಮ್ಮ 1.01 ಕೋಟಿ ರೂ. ನಿವೃತ್ತಿ ನಿಧಿಯನ್ನು ಪಿಎಂ ಕೇರ್ಸ್ ಫಂಡ್ಗೆ ದೇಣಿಗೆಯಾಗಿ ನೀಡಿದ್ದಾರೆ.
ಭೋಪಾಲ್ನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿಗಳು ಮತ್ತು ಸಂಕಷ್ಟ ಕಾಲದಲ್ಲಿ ಜನರಿಗೆ ನೆರವಾಗಲು ಈ ನಿಧಿ ಸೂಕ್ತವೆಂದು ತಿಳಿಸಿದ್ದಾರೆ.
ಹಣದ ದೇಣಿಗೆಯಲ್ಲದೆ, ತಾವು ಹಾಗೂ ತಮ್ಮ ಪತ್ನಿ ಇಂದಿರಾ ಸಿಂಗ್ ಮರಣದ ನಂತರ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ದೇಹ ದಾನ ಮಾಡುವುದಾಗಿ ಘೋಷಿಸಿದ್ದಾರೆ.