
ತಮಿಳುನಾಡಿನಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಸರ್ಕಾರವು ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಚಿಕನ್ ಬಿರಿಯಾನಿ ನೀಡಲು ಮುಂದಾಗಿದೆ.
ಸೆಪ್ಟೆಂಬರ್ 22 ರಂದು 6 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಈ ಯೋಜನೆಯನ್ನು ಹಂತ ಹಂತವಾಗಿ ಪ್ರಾಯೋಗಿಕವಾಗಿ ವಿಸ್ತರಿಸಲಾಗುವುದು ಎಂದು ಶಿಕ್ಷಣ ಸಚಿವ ರಾಜಮೋಹನ್ ತಿಳಿಸಿದ್ದಾರೆ.
ಈ ಯೋಜನೆಗಾಗಿ ಪ್ರಸ್ತುತ ಹಣಕಾಸು ವರ್ಷದಲ್ಲಿ ಹೆಚ್ಚುವರಿಯಾಗಿ ₹217.63 ಕೋಟಿ ಮೀಸಲಿಡಲಾಗಿದ್ದು, ಒಟ್ಟು ಬಜೆಟ್ ₹724 ಕೋಟಿಗೆ ಏರಿಕೆಯಾಗಿದೆ.