
ವಿಧಾನಸಭೆ ಮತ್ತು ಪರಿಷತ್ತಿನ ಸಾಂವಿಧಾನಿಕ ಹುದ್ದೆಗಳ ನೇಮಕಕ್ಕೆ ಕಾಂಗ್ರೆಸ್ ಪಕ್ಷದ ಲೆಟರ್ಹೆಡ್ ಬಳಸಿದ್ದಕ್ಕೆ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಭಾಧ್ಯಕ್ಷರು, ಉಪಸಭಾಧ್ಯಕ್ಷರು, ಸಭಾಪತಿ ಮತ್ತು ಉಪಸಭಾಪತಿ ಹುದ್ದೆಗಳನ್ನು ಪಕ್ಷದ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿರುವುದು ಸಂಸದೀಯ ಸಂಪ್ರದಾಯದ ಉಲ್ಲಂಘನೆ ಎಂದು ಬಿಜೆಪಿ ಆರೋಪಿಸಿದೆ.
ದೆಹಲಿಯಿಂದಲೇ ಈ ಹುದ್ದೆಗಳ ಹೆಸರುಗಳನ್ನು ಪಕ್ಷದ ಪತ್ರದಲ್ಲಿ ಕಳುಹಿಸಿರುವುದು ಸಾಂವಿಧಾನಿಕ ಮೌಲ್ಯಗಳಿಗೆ ಧಕ್ಕೆ ತರುವ ಪ್ರಯತ್ನ ಎಂದು ಸುರೇಶ್ ಕುಮಾರ್ ಟೀಕಿಸಿದ್ದಾರೆ.