
ಕರ್ನಾಟಕ ಸಂಪುಟದಲ್ಲಿ ಮಹಿಳಾ ಸಚಿವರು ಇಲ್ಲದಿರುವ ಬಗ್ಗೆ ಕೇಂದ್ರ ಸಚಿವ ಕಿರಣ್ ರಿಜಿಜು ಮಾಡಿದ ಟೀಕೆಗೆ ಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ರಾಜ್ಯದ 33 ಸಚಿವರ ಪೈಕಿ ಒಬ್ಬರೂ ಮಹಿಳೆಯರಿಲ್ಲ ಎಂಬ ವಿಷಯವನ್ನು ಪ್ರಸ್ತಾಪಿಸಿದ್ದ ರಿಜಿಜು, ಕಾಂಗ್ರೆಸ್ನ ಮಹಿಳಾ ಮೀಸಲಾತಿ ಬದ್ಧತೆಯನ್ನು ಪ್ರಶ್ನಿಸಿದ್ದರು.
ಕಾಂಗ್ರೆಸ್ ಮಹಿಳಾ ಪ್ರಾತಿನಿಧ್ಯಕ್ಕೆ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ ಡಿಕೆ ಶಿವಕುಮಾರ್, ಶೀಘ್ರದಲ್ಲೇ ಸಂಪುಟದಲ್ಲಿ ಮಹಿಳೆಗೆ ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.