
ಉಕ್ರೇನ್ನ ಸುಮಿ ನಗರದ ಮೇಲೆ ರಷ್ಯಾ ನಡೆಸಿದ ಭೀಕರ ಡ್ರೋನ್ ದಾಳಿಯಲ್ಲಿ ಭಾರತೀಯ ಮೂಲದ ಉದ್ಯಮಿ ರಾಜೀವ್ ಗುಪ್ತಾ ಅವರಿಗೆ ಸೇರಿದ 'ಕುಸುಮ್ ಗ್ರೂಪ್' ಔಷಧ ತಯಾರಿಕಾ ಘಟಕ ಸಂಪೂರ್ಣ ನಾಶಗೊಂಡಿದೆ.
ಈ ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದು, ಕಂಪನಿಗೆ ಕನಿಷ್ಠ 400 ಕೋಟಿ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ವರದಿಯಾಗಿದೆ.
ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು, ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿ ರಷ್ಯಾ ದಾಳಿ ನಡೆಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.