
ಅಜಿತ್ ಅಗರ್ಕರ್ ರಾಜೀನಾಮೆಯಿಂದ ತೆರವಾಗಿದ್ದ ಪುರುಷರ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಆಟಗಾರ ಪ್ರಗ್ಯಾನ್ ಓಜಾ ಅವರನ್ನು ಬಿಸಿಸಿಐ ನೇಮಿಸಿದೆ.
ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಡಿರುವ ಅನುಭವ ಹಾಗೂ ಹಿರಿಯತೆಯ ಆಧಾರದ ಮೇಲೆ ಪ್ರಗ್ಯಾನ್ ಓಜಾ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಇದರೊಂದಿಗೆ ಮಾಜಿ ಆಟಗಾರ ರಮೇಶ್ ಪವಾರ್ ಅವರನ್ನು ಆಯ್ಕೆ ಸಮಿತಿಯ ನೂತನ ಸದಸ್ಯರನ್ನಾಗಿ ಬಿಸಿಸಿಐ ನೇಮಕ ಮಾಡಿದೆ.