
ಕರ್ನಾಟಕ ಸರ್ಕಾರವು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಬೆಂಗಳೂರು ನಗರ ಭೂಸ್ವಾಧೀನಾಧಿಕಾರಿ ಸೇರಿದಂತೆ ನಾಲ್ವರು ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ಜಿಲ್ಲೆಯ ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದ ಸೌಮ್ಯ ಎನ್ ಗೌಡ ಅವರನ್ನು ಕಂದಾಯ ಇಲಾಖೆಯ ಉಪ ಕಾರ್ಯದರ್ಶಿಯಾಗಿ ಮತ್ತು ತಬಸ್ಸುಮ್ ಜಹೇರಾ ಅವರನ್ನು ತುಮಕೂರಿನ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ನೇಮಿಸಲಾಗಿದೆ.
ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದ ಸೋಮಪ್ಪ ಕಡಕೋಳ ಅವರನ್ನು ತುಮಕೂರು ನಗರ ಪಾಲಿಕೆ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಹಾಗೂ ಡಾ. ವಿಜಯ್ ಕುಮಾರ್ ಬಿ. ಅಜೂರ್ ಅವರನ್ನು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ ನೇಮಿಸಲಾಗಿದೆ.