
ಕೇಂದ್ರ ಚುನಾವಣಾ ಆಯೋಗವು ಪಶ್ಚಿಮ ಬಂಗಾಳ, ತಮಿಳುನಾಡು, ಪುದುಚೇರಿ ಮತ್ತು ಅಸ್ಸಾಂನ ಒಟ್ಟು 6 ಕ್ಷೇತ್ರಗಳಿಗೆ ಉಪಚುನಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಅಕ್ಟೋಬರ್ 6ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 9ರಂದು ಮತಎಣಿಕೆ ಮತ್ತು ಫಲಿತಾಂಶ ಪ್ರಕಟವಾಗಲಿದೆ; ಸೆಪ್ಟೆಂಬರ್ 9ರಂದು ಅಧಿಸೂಚನೆ ಹೊರಬೀಳಲಿದೆ.
ನಂದಿಗ್ರಾಮ, ರೇಜಿನಗರ, ಮಧುರಾಂತಕಂ, ಧರಾಪುರಂ, ತಟ್ಟಂಚಾವಡಿ ವಿಧಾನಸಭಾ ಕ್ಷೇತ್ರಗಳು ಮತ್ತು ನೌಗಾಂವ್ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.