
ಥೈಲ್ಯಾಂಡ್‌ನ ಬ್ಯಾಂಕಾಕ್ ಸಮೀಪದ ದೇಬ್ಸಿರಿನ್ ನೊಂಥಬುರಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಶಿಕ್ಷಕ ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿದ್ದಾರೆ.
ದಾಳಿ ನಡೆಸಿದ ವಿದ್ಯಾರ್ಥಿಯು ಕೃತ್ಯದ ನಂತರ ಶಾಲಾ ಆವರಣದಲ್ಲೇ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಗಾಯಗೊಂಡವರಲ್ಲಿ ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ.
ಘಟನೆಯ ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದು, ವಿದ್ಯಾರ್ಥಿ ಬಂದೂಕನ್ನು ಹೇಗೆ ಪಡೆದನು ಮತ್ತು ದಾಳಿಯ ಹಿಂದಿನ ಉದ್ದೇಶವೇನು ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.