
ಕರ್ನಾಟಕ ಸರ್ಕಾರ ಹೊರಡಿಸಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಮೀಸಲಾತಿ ಆದೇಶಕ್ಕೆ ಕೊಡಗು ಜಿಲ್ಲೆಯಲ್ಲಿ ಅಲ್ಪಸಂಖ್ಯಾತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಅಲ್ಪಸಂಖ್ಯಾತ ಮತದಾರರು ಹೆಚ್ಚಿರುವ ಕ್ಷೇತ್ರಗಳಲ್ಲಿ ಮಹಿಳಾ ಅಥವಾ ಇತರೆ ವರ್ಗಗಳಿಗೆ ಮೀಸಲಾತಿ ನೀಡಿರುವುದರಿಂದ ಸ್ಪರ್ಧಿಸಲು ಅವಕಾಶವಿಲ್ಲದಂತಾಗಿದೆ ಎಂದು ಅಲ್ಪಸಂಖ್ಯಾತರು ಆರೋಪಿಸಿದ್ದಾರೆ.
ಈ ಅಸಮಾಧಾನದ ಕುರಿತು ಅಲ್ಪಸಂಖ್ಯಾತ ಮುಖಂಡರು ಇಬ್ಬರು ಶಾಸಕರ ಬಳಿ ಸಭೆ ನಡೆಸಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಶಾಸಕರು ಸರಿಪಡಿಸುವ ಭರವಸೆ ನೀಡಿದ್ದಾರೆ.