
2026-27ನೇ ಸಾಲಿನ ಪಿಜಿ ನೀಟ್ ಪ್ರವೇಶಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ಅಧಿಸೂಚನೆ ಪ್ರಕಟಿಸಿ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 15ರ ಬೆಳಿಗ್ಗೆ 11:00 ಗಂಟೆಯವರೆಗೆ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಬೆಂಗಳೂರಿನ ಕೆಇಎ ಕಚೇರಿಯಲ್ಲಿ ಖುದ್ದಾಗಿ ಮೂಲ ದಾಖಲೆ ಪರಿಶೀಲನೆ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.