
ದೆಹಲಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಗೆ ಅಡಚಣೆಯಾಗಿದ್ದು, 250ಕ್ಕೂ ಹೆಚ್ಚು ವಿಮಾನಗಳ ಸಂಚಾರ ವಿಳಂಬವಾಗಿದೆ.
ಹವಾಮಾನ ವೈಪರೀತ್ಯದ ಕಾರಣದಿಂದಾಗಿ 3 ಅಂತಾರಾಷ್ಟ್ರೀಯ ವಿಮಾನಗಳು ಸೇರಿದಂತೆ ಒಟ್ಟು 15 ವಿಮಾನಗಳ ಮಾರ್ಗವನ್ನು ಜೈಪುರ, ಚಂಡೀಗಢ ಮತ್ತು ಲಕ್ನೋಗೆ ಬದಲಾಯಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆಯು ದೆಹಲಿ-ಎನ್‌ಸಿಆರ್ ಪ್ರದೇಶಕ್ಕೆ ಭಾರಿ ಮಳೆಯ ರೆಡ್ ಅಲರ್ಟ್ ನೀಡಿದ್ದು, ಗುರುಗ್ರಾಮ ಮತ್ತು ಫರೀದಾಬಾದ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.