
ಕಾವೇರಿ ನೀರು ಹಂಚಿಕೆ ವಿವಾದ ಮತ್ತು ತಮಿಳುನಾಡಿನ ಪರವಾದ ಸಿಡಬ್ಲ್ಯೂಎಂಎ ಆದೇಶವನ್ನು ಖಂಡಿಸಿ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗಸ್ಟ್ 13ರಂದು ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ.
ಬಂದ್ ದಿನದಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ರಾಜ್ಯಾದ್ಯಂತ ಸಾರಿಗೆ, ಶಾಲಾ-ಕಾಲೇಜುಗಳು, ಬ್ಯಾಂಕ್ಗಳು ಮತ್ತು ಸರ್ಕಾರಿ ಕಚೇರಿಗಳು ಸ್ಥಗಿತಗೊಳ್ಳಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಲಾಗಿದೆ.
ಕಾವೇರಿ ವಿವಾದದ ಕುರಿತು ಚರ್ಚಿಸಲು ಆಗಸ್ಟ್ 2ರಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದ್ದು, ಕಾನೂನಾತ್ಮಕ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು.