
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ ಕಳೆಗಟ್ಟಿದ್ದು, ಪಟ್ಟದ ಗೊಂಬೆಗಳು ಹಾಗೂ ಮೈಸೂರು ದಸರಾ ಮಾದರಿಗಳನ್ನು ಪ್ರದರ್ಶಿಸಲಾಗಿದೆ.
ಸಂಗೀತ ನಿರ್ದೇಶಕ ಹಂಸಲೇಖ ಅವರು ಈ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿ, ಜಾನಪದ ಕಲಾವಿದರೊಂದಿಗೆ ಡೊಳ್ಳು ಕುಣಿತಕ್ಕೆ ಹೆಜ್ಜೆ ಹಾಕಿದರು.
ದೇಶ-ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಕರ್ನಾಟಕದ ಸಂಸ್ಕೃತಿಯ ಪರಿಚಯಿಸಲು ವಿಮಾನ ನಿಲ್ದಾಣದಲ್ಲಿ 9 ದಿನಗಳ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.