
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC) ಪ್ರಕಾರ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.0ರಷ್ಟು ದಾಖಲಾಗಿದೆ.
ಭೂಮಿಯ 10 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಪತ್ತೆಯಾಗಿದ್ದು, ಕೇಂದ್ರದಿಂದ ಸುಮಾರು 20ರಿಂದ 30 ಕಿ.ಮೀ. ವ್ಯಾಪ್ತಿಯಲ್ಲಿ ಕಂಪನದ ಅನುಭವವಾಗಿರುವ ಸಾಧ್ಯತೆಯಿದೆ.