Health & Environment
ದೊಡ್ಡಬಳ್ಳಾಪುರದಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲು

ದೊಡ್ಡಬಳ್ಳಾಪುರದಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲು

tv9kannada1h
THE BRIEF
1

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ.

2

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC) ಪ್ರಕಾರ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.0ರಷ್ಟು ದಾಖಲಾಗಿದೆ.

3

ಭೂಮಿಯ 10 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಪತ್ತೆಯಾಗಿದ್ದು, ಕೇಂದ್ರದಿಂದ ಸುಮಾರು 20ರಿಂದ 30 ಕಿ.ಮೀ. ವ್ಯಾಪ್ತಿಯಲ್ಲಿ ಕಂಪನದ ಅನುಭವವಾಗಿರುವ ಸಾಧ್ಯತೆಯಿದೆ.