
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿ-ಫಾರ್ಮಾ ಲ್ಯಾಟರಲ್ ಪ್ರವೇಶಕ್ಕಾಗಿ ಆಗಸ್ಟ್ 20ರಿಂದ 23ರವರೆಗೆ ಆಪ್ಷನ್ ಎಂಟ್ರಿ ಪ್ರಕ್ರಿಯೆಯನ್ನು ನಿಗದಿಪಡಿಸಿದೆ.
ಆಗಸ್ಟ್ 24ರಂದು ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟವಾಗಲಿದ್ದು, ಆಕ್ಷೇಪಣೆಗಳ ಪರಿಶೀಲನೆಯ ನಂತರ ಆಗಸ್ಟ್ 25ರಂದು ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ.
ಅಂತಿಮ ಪಟ್ಟಿಯಲ್ಲಿ ಸೀಟು ಪಡೆದ ಅಭ್ಯರ್ಥಿಗಳು ಶುಲ್ಕ ಪಾವತಿಸಿ ಕಾಲೇಜು ಪ್ರವೇಶ ಪಡೆಯಲು ಆಗಸ್ಟ್ 27 ಕೊನೆಯ ದಿನವಾಗಿದೆ.