
ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧ ತೀವ್ರಗೊಂಡಿದ್ದು, ರಷ್ಯಾದ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಉಕ್ರೇನ್ ಪಡೆಗಳು ಡ್ರೋನ್ ದಾಳಿ ನಡೆಸಿವೆ.
ದಾಳಿಯ ಪರಿಣಾಮ ಇಂಧನ ಶೇಖರಣಾ ಟ್ಯಾಂಕ್ಗಳಲ್ಲಿ ಭಾರಿ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದ್ದು, ಆಕಾಶದಲ್ಲಿ ಕಪ್ಪು ಬಣ್ಣದ ದಟ್ಟ ಹೊಗೆ ಆವರಿಸಿದೆ.
ಈ ಘಟನೆಯಿಂದ ಸ್ಥಳೀಯ ನಿವಾಸಿಗಳಲ್ಲಿ ಭೀತಿ ಉಂಟಾಗಿದ್ದು, ಸುತ್ತಮುತ್ತಲಿನ ಜನರನ್ನು ಸುರಕ್ಷಿತವಾಗಿ ತೆರವುಗೊಳಿಸಲಾಗಿದೆ.