
ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ 16ನೇ ಆವೃತ್ತಿಯ 'ಏರೋ ಇಂಡಿಯಾ 2027' ಪ್ರದರ್ಶನವು ಫೆಬ್ರವರಿ 8 ರಿಂದ 12 ರವರೆಗೆ ಐದು ದಿನಗಳ ಕಾಲ ನಡೆಯಲಿದೆ.
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್) ಈ ಬಾರಿಯ ಪ್ರದರ್ಶನಕ್ಕೆ ಪ್ರಮುಖ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸಲಿದೆ.
ಈ ಕಾರ್ಯಕ್ರಮದಲ್ಲಿ ಜಾಗತಿಕ ಏರೋಸ್ಪೇಸ್ ಕಂಪನಿಗಳು, ರಕ್ಷಣಾ ತಜ್ಞರು, ವಿಜ್ಞಾನಿಗಳು ಮತ್ತು ಕೈಗಾರಿಕೋದ್ಯಮಿಗಳು ಭಾಗವಹಿಸಲಿದ್ದು, ರಕ್ಷಣಾ ಉತ್ಪಾದನೆಯನ್ನು ಉತ್ತೇಜಿಸಲಾಗುವುದು.