
ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ಬಸ್‌ಗಳ ಲೈವ್ ಟ್ರ್ಯಾಕಿಂಗ್ ಸೌಲಭ್ಯವನ್ನು ಓಲಾ ಮತ್ತು ಊಬರ್ ಆ್ಯಪ್‌ಗಳಿಗೆ ವಿಸ್ತರಿಸಲು ಸಾರಿಗೆ ಸಚಿವ ಬೈರತಿ ಸುರೇಶ್ ನಿರ್ದೇಶನ ನೀಡಿದ್ದಾರೆ.
ಮೆಟ್ರೋ ನಿಲ್ದಾಣಗಳಿಗೆ ಲಾಸ್ಟ್ ಮೈಲ್ ಕನೆಕ್ಟಿವಿಟಿ ಕಲ್ಪಿಸಲು 200 ಮಿನಿ ಎಸಿ ಎಲೆಕ್ಟ್ರಿಕ್ ಬಸ್‌ಗಳನ್ನು ನಿಯೋಜಿಸಲಾಗುತ್ತಿದ್ದು, ಇವು 5 ಕಿ.ಮೀ ವ್ಯಾಪ್ತಿಯಲ್ಲಿ ಸಂಚರಿಸಲಿವೆ.
ಐಟಿ-ಬಿಟಿ ಕಂಪನಿಗಳ ಉದ್ಯೋಗಿಗಳಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹವಾನಿಯಂತ್ರಿತ ಬಸ್‌ಗಳನ್ನು ಒದಗಿಸಲು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.