
ಬೆಂಗಳೂರಿನ ಮೇಖ್ರಿ ಸರ್ಕಲ್‌ನಿಂದ ಹೆಬ್ಬಾಳದವರೆಗಿನ ರಸ್ತೆಯನ್ನು ನಾಲ್ಕು ಪಥದ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಕಾಮಗಾರಿಯ ಹಿನ್ನೆಲೆಯಲ್ಲಿ ಮುಂದಿನ 18 ತಿಂಗಳ ಕಾಲ ಸಂಚಾರಕ್ಕೆ ನಿರ್ಬಂಧಿಸಲಾಗಿದೆ.
ಬಸ್ ಹಾಗೂ ಲಾರಿ ಸೇರಿದಂತೆ ಎಲ್ಲಾ ಸರಕು ಸಾಗಣೆ ವಾಹನಗಳಿಗೆ ಈ ಮಾರ್ಗದಲ್ಲಿ ಸಂಪೂರ್ಣ ನಿಷೇಧ ಹೇರಲಾಗಿದೆ.
ವಿಮಾನ ನಿಲ್ದಾಣಕ್ಕೆ ತೆರಳುವ ಸವಾರರು ಬಳ್ಳಾರಿ ರಸ್ತೆಯಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಮುಂಚಿತವಾಗಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.