
ಆತ್ಮಸಾಕ್ಷಿಯ ಆಧಾರದ ಮೇಲೆ ಅಥವಾ ಧಾರ್ಮಿಕ ನಂಬಿಕೆಯ ಕಾರಣಕ್ಕೆ ಯಾರಾದರೂ ವಂದೇ ಮಾತರಂ ಹಾಡಲು ನಿರಾಕರಿಸಿದರೆ ಅವರನ್ನು ದಂಡನಾತ್ಮಕ ಕ್ರಮಗಳಿಗೆ ಗುರಿಪಡಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ವಂದೇ ಮಾತರಂನ ಎಲ್ಲಾ ಆರು ಚರಣಗಳನ್ನು ಕಡ್ಡಾಯವಾಗಿ ಹಾಡಬೇಕು ಹಾಗೂ ಉಲ್ಲಂಘಿಸಿದರೆ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸಿದೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ತ್ರಿಸದಸ್ಯ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿ, ಧಾರ್ಮಿಕ ಸ್ವಾತಂತ್ರ್ಯ ಹಾಗೂ ಆತ್ಮಸಾಕ್ಷಿಯ ಹಕ್ಕುಗಳ ರಕ್ಷಣೆಗೆ ಬದ್ಧವಿರುವುದಾಗಿ ತಿಳಿಸಿದೆ.