
ಜಪಾನ್ನ ಐಚಿ-ನಗೋಯಾದಲ್ಲಿ ಸೆಪ್ಟೆಂಬರ್ 19ರಿಂದ ಆರಂಭವಾಗಲಿರುವ ಏಷ್ಯನ್ ಗೇಮ್ಸ್ನಲ್ಲಿ ಭಾರತ ತಂಡ ಚಿನ್ನದ ಪದಕದ ಗುರಿಯೊಂದಿಗೆ ಕಣಕ್ಕಿಳಿಯಲಿದೆ.
ಮಹಿಳಾ ಕ್ರಿಕೆಟ್ ಸೆಪ್ಟೆಂಬರ್ 17ರಿಂದ 22ರವರೆಗೆ ನಡೆಯಲಿದ್ದು, ಭಾರತ ತಂಡ ಸೆಪ್ಟೆಂಬರ್ 18ರಂದು ಸಂಜೆ 5:30ಕ್ಕೆ ಆತಿಥೇಯ ಜಪಾನ್ ವಿರುದ್ಧ ಕ್ವಾರ್ಟರ್ ಫೈನಲ್ ಆಡಲಿದೆ.
ಪುರುಷರ ಕ್ರಿಕೆಟ್ ಸೆಪ್ಟೆಂಬರ್ 24ರಿಂದ ಅಕ್ಟೋಬರ್ 3ರವರೆಗೆ ನಡೆಯಲಿದ್ದು, ಭಾರತ ತಂಡ ಸೆಪ್ಟೆಂಬರ್ 28ರಂದು ತನ್ನ ಕ್ವಾರ್ಟರ್ ಫೈನಲ್ ಪಂದ್ಯವನ್ನು ಆಡಲಿದೆ.