
ದೀಪಾವಳಿ ಮತ್ತು ಛತ್‌ಪೂಜೆ ಹಬ್ಬಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಭಾರಿ ದಟ್ಟಣೆಯನ್ನು ನಿರ್ವಹಿಸಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ದೆಹಲಿಯ ಆನಂದ್ ವಿಹಾರ್ ರೈಲು ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಲ್ದಾಣದಲ್ಲಿ ಸ್ವಚ್ಛತೆ, ರೈಲುಗಳ ವೇಳಾಪಟ್ಟಿ ಮತ್ತು ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದ ಸಚಿವರು ಪ್ರಯಾಣಿಕರು ಹಾಗೂ ಚಹಾ ಅಂಗಡಿಯವರೊಂದಿಗೆ ಸಂವಾದ ನಡೆಸಿ ಯುಪಿಐ ಮೂಲಕ ಹಣ ಪಾವತಿಸಿದರು.
ಹಬ್ಬದ ಅವಧಿಯಲ್ಲಿ ನೂಕುನುಗ್ಗಲು ತಡೆಯಲು ವಿಶೇಷ ರೈಲುಗಳ ಕಾರ್ಯಾಚರಣೆ ಹಾಗೂ ರೈಲ್ವೆ ಸುರಕ್ಷತಾ ಪಡೆ ಸಿಬ್ಬಂದಿಯನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.