
ತುಮಕೂರಿನಿಂದ ಮಧುಗಿರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕನೊಬ್ಬನಿಗೆ ಹೃದಯಾಘಾತ ಸಂಭವಿಸಿದಾಗ, ಚಾಲಕ ಸಮಯಪ್ರಜ್ಞೆ ಮೆರೆದು ಬಸ್ಸನ್ನು ನೇರವಾಗಿ ಆಸ್ಪತ್ರೆಯ ಮುಂಭಾಗಕ್ಕೆ ಕೊಂಡೊಯ್ದಿದ್ದಾರೆ.
ಎದೆನೋವಿನಿಂದ ಅಸ್ವಸ್ಥರಾದ ಪ್ರಯಾಣಿಕನನ್ನು ಸಾಚಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲು ಚಾಲಕ ತಕ್ಷಣವೇ ಸ್ಪಂದಿಸಿದ್ದು, ಇದರಿಂದಾಗಿ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಾಲಕನ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ತಲುಪಿಸಿದ ನಿರ್ಧಾರದಿಂದ ಪ್ರಯಾಣಿಕನ ಜೀವ ಉಳಿದಿದೆ.