
ಬೆಂಗಳೂರಿನಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕ ಇಂದುಶೇಖರ್ ತನ್ನ ಪತ್ನಿ ಸೇರಿದಂತೆ ಆಕೆಯ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಹೊಡೆದು ಹತ್ಯೆ ಮಾಡಿದ್ದಾನೆ.
ಪತ್ನಿ ತವರು ಮನೆಯವರೊಂದಿಗೆ ಸಂಬಂಧ ಮುಂದುವರಿಸಿದ್ದಕ್ಕೆ ಅಸಮಾಧಾನಗೊಂಡಿದ್ದ ಆರೋಪಿ, ಪೂರ್ವಯೋಜಿತವಾಗಿ ಈ ಕೃತ್ಯ ಎಸೆಗಿ ಮೃತದೇಹಗಳನ್ನು ನಂದಿಬೆಟ್ಟದ ಸುತ್ತಮುತ್ತ ಎಸೆದಿದ್ದಾನೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.