
ಬಾಲಿವುಡ್ ನಟ ಅಕ್ಷಯ್ ಖನ್ನಾ ಪ್ರಶಾಂತ್ ವರ್ಮಾ ನಿರ್ದೇಶನದ ಬಹುನಿರೀಕ್ಷಿತ ತೆಲುಗು ಚಿತ್ರ ‘ಮಹಾಕಾಳಿ’ ಮೂಲಕ ಟಾಲಿವುಡ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಚಿತ್ರದಲ್ಲಿ ಅಕ್ಷಯ್ ಖನ್ನಾ ಅವರು ಅಸುರರ ಗುರುವಾದ ಶುಕ್ರಾಚಾರ್ಯನ ಗಂಭೀರ ಹಾಗೂ ಶಕ್ತಿಶಾಲಿ ಪಾತ್ರವನ್ನು ಪೋಷಿಸುತ್ತಿದ್ದು, ಅವರ ಫಸ್ಟ್ ಲುಕ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಆಗಸ್ಟ್ 24ರಂದು ಸಿನಿಮಾದ ವಿಶೇಷ ಗ್ಲಿಂಪ್ಸ್ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ‘24th August - The End Begins’ ಎಂದು ಬರೆದುಕೊಂಡು ಘೋಷಿಸಿದೆ.