
ಐದು ತಿಂಗಳಿಂದ ಪಿಂಚಣಿ ಸಿಗದ ಕಾರಣ ವಿಶೇಷಚೇತನರು ರಾಮನಗರದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಆರಂಭಿಸಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಆರಂಭದಲ್ಲಿ ಕಣಮಿಣಿಕೆ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದ್ದರೂ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಆರ್. ಅಶೋಕ್ ಮನವಿ ಮೇರೆಗೆ ಪಾದಯಾತ್ರೆಗೆ ಅವಕಾಶ ನೀಡಲಾಯಿತು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಬೇಡಿಕೆ ಈಡೇರದಿದ್ದರೆ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ್ದಾರೆ.