
ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಸ್ಟಿಂಗ್ ಆಪರೇಷನ್ ವಿಡಿಯೋ ಸಂಬಂಧ ಅಕ್ಟೋಬರ್ 6ರಂದೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರು ನೀಡಿದ್ದು, ಸಿಸಿಬಿ ತನಿಖೆಯನ್ನು ಚುರುಕುಗೊಳಿಸಿದೆ.
ಅಪರಿಚಿತ ವ್ಯಕ್ತಿಗಳು ನಕಲಿ ಗುರುತು ಬಳಸಿ ಸುಳ್ಳು ಹಾಗೂ ದುರುದ್ದೇಶಪೂರಿತ ವಿಡಿಯೋ ಸೃಷ್ಟಿಸಿ ಯೂಟ್ಯೂಬ್ನಲ್ಲಿ ಹಂಚಿಕೊಂಡು ತಮ್ಮ ಗೌರವಕ್ಕೆ ಹಾನಿ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಕಾಯ್ದೆ ಹಾಗೂ ಬಿಎನ್ಎಸ್ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.