
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಗೆ ಲಾರಿಯನ್ನು ವೇಗವಾಗಿ ಮುನ್ನುಗ್ಗಿಸಿ ಡಿಕ್ಕಿ ಹೊಡೆಸಲು ಯತ್ನಿಸಿದ ಅಮಾನವೀಯ ಘಟನೆ ನಡೆದಿದೆ.
ಲಾರಿಯ ಹಿಂಬದಿಯ ಕಾರಿನ ಡ್ಯಾಶ್ಕ್ಯಾಮೆರಾದಲ್ಲಿ ಸೆರೆಯಾದ ಈ ವೀಡಿಯೋ ವೈರಲ್ ಆದ ತಕ್ಷಣ ಅಲಯಾರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಕೇರಳ ಮೂಲದ ಲಾರಿ ಚಾಲಕನನ್ನು ಪತ್ತೆ ಹಚ್ಚಿದ್ದಾರೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಚಾಲಕನಿಗೆ 5,000 ರೂ. ನಗದು ದಂಡ ವಿಧಿಸಿ, ಮುಂದಿನ ದಿನಗಳಲ್ಲಿ ಇಂತಹ ತಪ್ಪು ಮರುಕಳಿಸದಂತೆ ಲಿಖಿತ ಮುಚ್ಚಳಿಕೆ ಪತ್ರ ಬರೆಸಿಕೊಳ್ಳಲಾಗಿದೆ.