
ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಬಿಡುಗಡೆಯಾದ 5 ದಿನಗಳಲ್ಲಿ ಜಾಗತಿಕವಾಗಿ ಒಟ್ಟು 285.20 ಕೋಟಿ ರೂಪಾಯಿ ಗಳಿಕೆ ಕಂಡಿದ್ದು, ಭಾನುವಾರ ದೇಶಾದ್ಯಂತ 23.00 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ.
ಭಾರತದಲ್ಲಿ ಈ ಚಿತ್ರದ ಒಟ್ಟು ಗ್ರಾಸ್ ಕಲೆಕ್ಷನ್ 255.95 ಕೋಟಿ ರೂಪಾಯಿ ತಲುಪಿದ್ದು, ವಿದೇಶಿ ಮಾರುಕಟ್ಟೆಯಲ್ಲಿ 29.25 ಕೋಟಿ ರೂಪಾಯಿ ಗಳಿಸಿದೆ ಎಂದು ಬಾಕ್ಸ್ ಆಫೀಸ್ ವರದಿ ತಿಳಿಸಿದೆ.
ಮೊದಲ ದಿನ 101.10 ಕೋಟಿ ರೂಪಾಯಿ ಗಳಿಸಿದ್ದ ಸಿನಿಮಾ, ಐದನೇ ದಿನಕ್ಕೆ ಬರುವಾಗ 25.3% ಆಕ್ಯುಪೆನ್ಸಿಯೊಂದಿಗೆ ಗಳಿಕೆಯಲ್ಲಿ ಗಮನಾರ್ಹ ಇಳಿಕೆ ಕಂಡಿದೆ.