
9ನೇ ತರಗತಿಯ ವಿದ್ಯಾರ್ಥಿಗಳಿಗೆ ತ್ರಿಭಾಷಾ ಕಲಿಕೆಯನ್ನು ಕಡ್ಡಾಯಗೊಳಿಸಿರುವ ಸಿಬಿಎಸ್‌ಇ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಭಾಷಾ ಹೇರಿಕೆಯಿಂದ ಮಕ್ಕಳು ಒತ್ತಡಕ್ಕೆ ಒಳಗಾಗಬಾರದು ಎಂದು ತಿಳಿಸಿದೆ.
ಜುಲೈ 1ರಿಂದ ಜಾರಿಗೆ ಬಂದಿರುವ ಈ ನೀತಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರಿಗೆ ಸೂಚಿಸಿದೆ.
ಭಾಷೆಯ ಆಯ್ಕೆ ಮತ್ತು ಹೆಚ್ಚುವರಿ ಮಾನವ ಸಂಪನ್ಮೂಲದ ಹೊಂದಾಣಿಕೆ ಕುರಿತು ರಾಜ್ಯ ಬೋರ್ಡ್‌ಗಳ ಮಾದರಿಯನ್ನು ಗಮನಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ನ್ಯಾಯಾಲಯವು ನಿರ್ದೇಶನ ನೀಡಿದೆ.