
ಕರ್ನಾಟಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಬೆಂಗಳೂರು, ಮೈಸೂರು ಹಾಗೂ ರಾಯಚೂರು ಸೇರಿದಂತೆ ರಾಜ್ಯದ 45 ಐಸ್ಕ್ರೀಂ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿದೆ.
ಪರಿಶೀಲನೆ ವೇಳೆ ಅವಧಿ ಮೀರಿದ ಐಸ್ಕ್ರೀಂ, ಹಾಲು, ಬಿಸ್ಕತ್ ಹಾಗೂ ಕೊಬ್ಬರಿ ಪುಡಿ ಪತ್ತೆಯಾಗಿದ್ದು, ಲೇಬಲಿಂಗ್ ನಿಯಮ ಉಲ್ಲಂಘನೆಯಾಗಿರುವುದು ಕಂಡುಬಂದಿದೆ.
ಗುಣಮಟ್ಟ ಪರಿಶೀಲನೆಗಾಗಿ ಐಸ್ಕ್ರೀಂ ಮತ್ತು ಹಾಲಿನ ಉತ್ಪನ್ನಗಳ ಒಟ್ಟು 70 ಆಹಾರ ಮಾದರಿಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ.