
ಉತ್ತರ ಕರ್ನಾಟಕ ಭಾಗದ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಕರ ನೇಮಕಾತಿಯಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆರೋಪಿಸಿದ್ದಾರೆ.
ಹಿರೇಕೆರೂರು ತಾಲ್ಲೂಕಿನ ಹಂಸಭಾವಿ ಗ್ರಾಮದಲ್ಲಿ ನಡೆದ ಮೃತ್ಯುಂಜಯ ವಿದ್ಯಾಪೀಠದ ಶತಮಾನೋತ್ಸವ ಸಂಚಿಕೆ ಬಿಡುಗಡೆ ಸಮಾರಂಭದಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಸಂಸ್ಥೆಯ ಶತಮಾನೋತ್ಸವದ ನೂತನ ಕಟ್ಟಡ ನಿರ್ಮಾಣಕ್ಕೆ ₹25 ಲಕ್ಷ ನೆರವು ನೀಡುವುದಾಗಿ ಅವರು ಘೋಷಿಸಿದ್ದಾರೆ.