Indian Politics
ಚುನಾವಣಾ ಆಯೋಗದ ವಿರುದ್ಧ CWC ಸಭೆಯಲ್ಲಿ ಕಾಂಗ್ರೆಸ್ ಸಮರ

ಚುನಾವಣಾ ಆಯೋಗದ ವಿರುದ್ಧ CWC ಸಭೆಯಲ್ಲಿ ಕಾಂಗ್ರೆಸ್ ಸಮರ

tv9kannada37m
THE BRIEF
1

ದೆಹಲಿಯ ಇಂದಿರಾ ಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಲಾಗಿದ್ದು, ಸಿಇಸಿ ಜ್ಞಾನೇಶ್ ಕುಮಾರ್ ಹಾಗೂ ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕೆಂದು ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

2

CWC ಸಭೆಯಲ್ಲಿ ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡಬೇಕು, SIR ಅಮಾನತುಗೊಳಿಸಬೇಕು ಹಾಗೂ ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ 13 ಕೋಟಿ 30 ಲಕ್ಷ ಹೆಸರುಗಳನ್ನು ಮರುಸೇರ್ಪಡೆಗೊಳಿಸಬೇಕೆಂದು ಒತ್ತಾಯಿಸಲಾಗಿದೆ.

3

ಚುನಾವಣಾ ಆಯೋಗದ ಮುಂದೆ 5 ಬೇಡಿಕೆಗಳನ್ನು ಇಡಲಾಗಿದ್ದು, ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಹಾಗೂ ಸೇರಿಸಿರುವ ದತ್ತಾಂಶವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.